ಮಲ್ಪೆ-ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸ್ಥಳಕ್ಕೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ
ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಮಲ್ಪೆ ಹೆಬ್ರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಆದಿ ಉಡುಪಿ ಪ್ರದೇಶಕ್ಕೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ ಹಲವು ದಿನಗಳಿದ ತಾತ್ಕಾಲಿಕವಾಗಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿ ನಿನ್ನೆ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಯವರು ಜಿಲ್ಲಾಡಳಿತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಕ್ಷಣ ಕಾಮಗಾರಿ ಮರು ಪ್ರಾರಂಭಕ್ಕೆ ಸೂಚನೆ ನೀಡಿದ ಬಳಿಕ ಕಾಮಗಾರಿ ಪ್ರಾರಂಭಗೊಂಡಿದೆ.
ಮಲ್ಪೆ ಮೀನುಗಾರಿಕೆ ಬಂದರು, ಪ್ರವಾಸೋದ್ಯಮ ಚಟುವಟಿಕೆಗಳಿಗೆ ಕೊಂಡಿಯಾಗಿರುವ ಈ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಕಾರ್ಯೋನ್ಮುಖ ವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಸವಿತಾ ಹರೀಶ್ ರಾಮ್, ಶ್ರೀಶ ಕೊಡವೂರು, ಮಾಜಿ ನಗರ ಸಭಾ ಸದಸ್ಯರಾದ ಹರೀಶ್ ರಾಮ್ ಬನ್ನಂಜೆ, ಸುರೇಶ್ ಶೆಟ್ಟಿ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.