ಕಾಪು: 18.5ಲಕ್ಷ ರೂ. ವೆಚ್ಚದ ಶಿಥಲೀಕೃತ ಶವಗಾರ ಕಟ್ಟಡಕ್ಕೆ ಗುದ್ದಲಿ ಪೂಜೆ
ಕಾಪು: ವಿಧಾನಸಭಾ ಕ್ಷೇತ್ರದ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ಶಿಥಲೀಕೃತ ಶವಗಾರ ಕಟ್ಟಡ” ನಿರ್ಮಾಣಕ್ಕೆ ಖನಿಜ ಪ್ರತಿಷ್ಠಾನ ನಿಧಿಯಿಂದ 18.5 ಲಕ್ಷ ರೂ. ಅನುದಾನದ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಗುದ್ದಲಿ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಸ್ಥಳೀಯ ಪುರಸಭಾ ಸದಸ್ಯರಾದ ಅರುಣ್ ಶೆಟ್ಟಿ ಪಾದೂರು, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ರೋಷನಿ ಪೂಂಜ ಹಾಗೂ ಕಾಪು ಪುರಸಭೆಯ ಸದಸ್ಯರು ಮತ್ತು ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.