ರಾಮಮಂದಿರ ಉದ್ಘಾಟನೆಗೆ ಹಾಜರಾಗುವುದಿಲ್ಲ: ಕಾಂಗ್ರೆಸ್ ಘೋಷಣೆ

ಹೊಸದಿಲ್ಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಹಾಜರಾಗುವುದಿಲ್ಲ ಎಂದು ಕಾಂಗ್ರೆಸ್ ಬುಧವಾರ ಘೋಷಿಸಿದೆ. ರಾಮ ಮಂದಿರ ಉದ್ಘಾಟನೆಯನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕರೆದಿರುವ ಪಕ್ಷವು, “ಧರ್ಮವು ವೈಯಕ್ತಿಕ ವಿಷಯ. ಆರೆಸ್ಸೆಸ್ – ಬಿಜೆಪಿ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಮಾಡಿದೆ” ಎಂದು ಕಾಂಗ್ರೆಸ್ ಹೇಳಿದೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಬಿಜೆಪಿ, ಆರೆಸ್ಸೆಸ್ ನಾಯಕರು ಅಯೋಧ್ಯೆಯಲ್ಲಿ ಅಪೂರ್ಣ ದೇವಾಲಯದ ಉದ್ಘಾಟನೆಯನ್ನು ಚುನಾವಣಾ ಲಾಭಕ್ಕಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Leave a Reply

Your email address will not be published. Required fields are marked *

error: Content is protected !!