ಭಾವಿ ಪರ್ಯಾಯ ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗುರುವಂದನೆ
ಉಡುಪಿ: ಶ್ರೀಸನ್ಮಾನ ಸಮಿತಿ, ಯುವಕ ಮಂಡಲ ಕುತ್ಯಾರು, ಉಲ್ಲಾಯ ಫ್ರೆಂಡ್ಸ್ ಕುತ್ಯಾರು ಇವರ ಸಹಭಾಗಿತ್ವದಲ್ಲಿ ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಏರಲಿರುವ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರಿಗೆ ಕುತ್ಯಾರು ಯುವಕ ಮಂಡಲದ ವಠಾರದಲ್ಲಿ ಇಂದು ಅತ್ಯಂತ ವೈಭವದಿಂದ ಹುಟ್ಟೂರ ಗುರುವಂದನೆ ಸಮರ್ಪಿಸಲಾಯಿತು.
ಗುರುವಂದನೆ ಸ್ವೀಕರಿಸಿದ ಪುತ್ತಿಗೆ ಶ್ರೀಪಾದರು ಆಶೀರ್ವಚನ ನೀಡಿದರು. ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಹಿರಿಯರಾದ ಕುತ್ಯಾರು ಕೃಷ್ಣಮೂರ್ತಿ ಭಟ್, ಸುಬ್ಬಯ್ಯ ಹೆಗ್ಡೆ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಸನ್ಮಾನ ಸಮಿತಿ ಕಾರ್ಯಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಕುತ್ಯಾರು ಯುವಕ ಮಂಡಲದ ಅಧ್ಯಕ್ಷರಾದ ಸುಶಾಂತ್ ಶೆಟ್ಟಿ, ಕುತ್ಯಾರು ಶ್ರೀಧರ ತಂತ್ರೀ, ಪ್ರಸಾದ್ ಶೆಟ್ಟಿ ಕುತ್ಯಾರು ಹಾಗೂ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.