ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭಾವಿ ಪರ್ಯಾಯ ಪುತ್ತಿಗೆ ಉಭಯ ಶ್ರೀಪಾದರು ಭೇಟಿ- ವಿಶೇಷ ಪೂಜೆ ಸಲ್ಲಿಕೆ

ಉಡುಪಿ: ಚತುರ್ಥ ಬಾರಿಗೆ ಪರ್ಯಾಯ ಪೀಠಾರೋಹಣ ಮಾಡಲಿರುವ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿ ಮತ್ತು ಅವರ ಶಿಷ್ಯ ಕಿರಿಯ ಯತಿಗಳಾದ ಸುಶ್ರೀಂದ್ರತೀರ್ಥ ಸ್ವಾಮೀಜಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು.

ಉಭಯ ಶ್ರೀಪಾದರನ್ನು ಧರ್ಮಸ್ಥಳ ದೇವಸ್ಥಾನದ ವತಿಯಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿ ತು. ಬಳಿಕ ಶ್ರೀಪಾದರು ದೇವಸ್ಥಾನದಲ್ಲಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಕ್ಷೇತ್ರದ ಸಂಪ್ರದಾಯದಂತೆ ಸ್ವಾಮೀಜಿಯವರಿಗೆ ಪಾದಪೂಜೆ ನೆರವೇರಿಸಲಾಯಿತು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ವಾಮೀಜಿಯವರಿಗೆ ಭಕ್ತಿಪೂರ್ವಕ ಸ್ವಾಗತ ಕೋರಿ ಶ್ರೀಗಳ ಪರ್ಯಾಯ ಪೀಠಾರೋಹಣ ಹಾಗೂ ಎಲ್ಲಾ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ಶ್ರೀ ಮಂಜುನಾಥ ಸ್ವಾಮಿಯನ್ನು ಪ್ರಾರ್ಥಿಸಿ ಅವರ ಅನುಗ್ರಹವನ್ನು ಕೋರಿದರು.

ಧರ್ಮಸ್ಥಳದ ವತಿಯಿಂದ ಸ್ವಾಮೀಜಿಯವರನ್ನು ಹೆಗಡೆಯವರು ಗೌರವಿಸಿದರು. ಆಶೀರ್ವಚನ ನೀಡಿದ ಸುಗುಣೇಂದ್ರತೀರ್ಥ ಸ್ವಾಮೀಜಿಯವರು, ಹೆಗ್ಗಡೆಯವರ ದಕ್ಷ ನೇತೃತ್ವದಲ್ಲಿ ಧರ್ಮಸ್ಥಳದ ಭವ್ಯ ಪರಂಪರೆ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡು ಇಲ್ಲಿನ ಆಚಾರ-ವಿಚಾರಗಳು, ನಂಬಿಕೆ-ನಡವಳಿಕೆಗಳು, ಶಿಸ್ತು, ಸ್ವಚ್ಛತೆ ಮತ್ತು ದಕ್ಷತೆ ಹಾಗೂ ಅನುಪಮ ಸೇವಾಕಾರ್ಯಗಳಿಂದಾಗಿ ಇಂದು ಧರ್ಮಸ್ಥಳ ಎಲ್ಲಾ ತೀರ್ಥಕ್ಷೇತ್ರಗಳಿಗೂ ಮಾದರಿ ಕ್ಷೇತ್ರವಾಗಿ ಬೆಳೆದಿದೆ ಶ್ಲಾಘಿಸಿದರು.

Leave a Reply

Your email address will not be published. Required fields are marked *

error: Content is protected !!