ಉಡುಪಿ ಸಿಟಿ ಮತ್ತು ಸರ್ವೀಸ್ ಬಸ್ ನಿಲ್ದಾಣಕ್ಕೆ ಆಧುನಿಕ ಸ್ಪರ್ಶ- ಶಾಸಕರಿಂದ ಸಭೆ
ನಗರಸಭೆ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರರೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ
ಉಡುಪಿ ನಗರಸಭೆಯ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣ, ವಿಶ್ವೇಶ್ವರಯ್ಯ ಮಾರುಕಟ್ಟೆ ಕಟ್ಟಡದ ವಾಣಿಜ್ಯ ಕಟ್ಟಡದ ಅಂಗಡಿ ಬಾಡಿಗೆದಾರ ರೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಸಭೆ ನಡೆಸಿದರು.
ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಿನ್ನೆಲೆಯಲ್ಲಿ ನಗರದ ವಾಹನ ದಟ್ಟಣೆ, ಪಾರ್ಕಿಂಗ್ ಕೊರತೆಯಿಂದ ಜನಸಾಮಾನ್ಯರಿಗೆ ತೀವ್ರ ಸಮಸ್ಯೆ ಉಂಟಾಗುತ್ತಿದೆ.
ಈಗಾಗಲೇ ನಗರಸಭೆ ವತಿಯಿಂದ ವೈಜ್ಞಾನಿಕ ರೀತಿಯಲ್ಲಿ ಸಿಟಿ ಬಸ್ ನಿಲ್ದಾಣ, ಸರ್ವೀಸ್ ಬಸ್ ನಿಲ್ದಾಣವನ್ನು ಆಧುನಿಕ ಶೈಲಿಯಲ್ಲಿ ವೈಜ್ಞಾನಿಕ ರೀತಿಯಲ್ಲಿ ನಿರ್ಮಿಸಲು ಯೋಜನೆ ರೂಪಿಸುತ್ತಿದೆ.
ಶೀಘ್ರದಲ್ಲೇ ಪರಿಣಿತರ ಮೂಲಕ ಈ ಬಗ್ಗೆ ನೀಲನಕ್ಷೆ ತಯಾರಿಸಿ ನೆಲ ಅಂತಸ್ತು ಸಹಿತ ಮಲ್ಟಿ ಲೆವೆಲ್ ಪಾರ್ಕಿಂಗ್ ವ್ಯವಸ್ಥೆ, ವಾಣಿಜ್ಯ ಅಂಗಡಿಗಳು ಹಾಗೂ ಸುಸಜ್ಜಿತ ಬಸ್ ನಿಲ್ದಾಣದ ನಿರ್ಮಾಣದ ಬಗ್ಗೆ ಕಾರ್ಯಪ್ರವೃತ್ತವಾಗಿದ್ದು ಇದಕ್ಕೆ ಅಂಗಡಿ ಬಾಡಿಗೆದಾರರ ಸಲಹೆ ಸಹಕಾರ ಕೋರಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಅಂಗಡಿ ಬಾಡಿಗೆದಾರರು ನಗರದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರದ ಆಶಯ ವ್ಯಕ್ತಪಡಿಸಿದರು.
ಸಭೆಯಲ್ಲಿ ಪೌರಾಯುಕ್ತರಾದ ರಾಯಪ್ಪ, ನಗರ ಸಭೆ ಸದಸ್ಯರು, ಅಧಿಕಾರಿಗಳು ಉಪಸ್ಥಿತರಿದ್ದರು.