ದ.ಕ.,ಉಡುಪಿ ಸಹಿತ 8 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’, ಮೀನುಗಾರು ದಡ ಸೇರಲು ಸೂಚನೆ
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಎದ್ದಿರುವ ಚಂಡಮಾರುತದಿಂದಾಗಿ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಈ ಭಾಗಗಳ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗಜಿಲ್ಲೆಗಳಲ್ಲಿ ಜೂ.1ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಜೂ.2 ರಂದು ಹೆಚ್ಚು ಮಳೆಯಾಗಲಿದೆ.
ಲಕ್ಷದ್ವೀಪ, ಕರ್ನಾಟಕ, ಕೇರಳದಲ್ಲಿ ಮೇ 31 ಮತ್ತು ಜೂ.1 ರಂದು ಭಾರೀ ಮಳೆಯಾದರೆ, ಮಹಾರಾಷ್ಟ್ರದಲ್ಲಿ ಜೂನ್ 2ರಿಂದ 4ರವರೆಗೆ ಮಳೆಯಾಗಲಿದೆ. ಗುಜರಾತಿನಲ್ಲಿ ಜೂನ್ 3 ರಿಂದ 5ರವರೆಗೆ ಮಳೆಯಾಗಲಿದೆ ಎಂದು ಹೇಳಿದೆ.
ಜೂನ್ 2ರ ವೇಳೆಗೆ ಕರ್ನಾಟಕದಲ್ಲಿ 90-100 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು. ಮೀನುಗಾರರು ಸಮದ್ರಕ್ಕೆ ಇಳಿಯಬಾರದು. ಮೀನುಗಾರಿಕೆಗೆ ತೆರಳಿದ ಮೀನುಗಾರು ಇಂದೇ ಮರಳಿ ದಡ ಸೇರಬೇಕು ಎಂದು ಸೂಚಿಸಲಾಗಿದೆ.