ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶ- ಸಿದ್ದರಾಮಯ್ಯಗೆ ಏಕವಚನದಲ್ಲಿ ಅನಂತಕುಮಾರ್ ಹೆಗಡೆ ನಿಂದನೆ

ಕುಮಟಾ: ಅಯೋಧ್ಯೆಯಲ್ಲಿನ ಬಾಬ್ರಿ ಮಸೀದಿಯಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಾಶವಾಗಲಿದೆ ಎಂದು ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಗೆ ಕೆಲವೇ ದಿನ ಬಾಕಿ ಇರುವ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಕುಮಟಾದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅನಂತಕುಮಾರ್ ಹೆಗಡೆ, ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಆಗಲಿದೆ. ಇದನ್ನು ಬೇಕಾದರೆ ಬೆದರಿಕೆ ಅಂತ ಬೇಕಾದರೂ ತಿಳಿಯಿರಿ. ಇದು ಹಿಂದೂ ಸಮಾಜದ ತೀರ್ಮಾನವೇ ವಿನಃ ಅನಂತಕುಮಾರ್ ಹೆಗಡೆ ತೀರ್ಮಾನ ಅಲ್ಲ. ಸಿರಸಿಯ ಸಿಪಿ ಬಜಾರ್​​ನಲ್ಲಿಯೂ ಮಸೀದಿ ಇದೆ. ಅದು ಈ ಹಿಂದೆ ವಿಜಯ ವಿಠ್ಠಲ ದೇವಸ್ಥಾನ ಆಗಿತ್ತು. ಶ್ರೀರಂಗಪಟ್ಟಣದಲ್ಲಿ ರುವ ದೊಡ್ಡ ಮಸೀದಿ ಮಾರುತಿ ದೇವಸ್ಥಾನವಾಗಿತ್ತು. ಇವತ್ತೂ ಅಲ್ಲಿಗೆ ಹೋದರೆ ಮಾರುತಿ ದೇವಸ್ತಾನ ಕಾಣುತ್ತದೆ ಎಂದು ಅನಂತಕುಮಾರ್ ಹೇಳಿದರು.

ಶತಮಾನಗಳಿಂದಲೂ ಹಿಂದೂ ಸಮಾಜವನ್ನು ಒಡೆಯುತ್ತಲೆ ಬರುತ್ತದ್ದಾರೆ. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ. ಅದು ಹಿಂದೂ ವಿರೋಧಿಗಳು, ಸನಾತನ ಧರ್ಮ ವಿರೋಧಿಗಳು. ಕಾಂಗ್ರೆಸ್ ನಮ್ಮ ವಿರೋಧಿ ಅಲ್ಲ, ಸಿಎಂ ಸಿದ್ದರಾಮಯ್ಯ ನಮ್ಮ ವಿರೋಧಿ. ಅಲ್ಪಸಂಖ್ಯಾತರ ಮತಕ್ಕಾಗಿ ಹರಾಜಾಗಿ ಹೊದವರು ನಮ್ಮ ವಿರೋಧಿಗಳು ಎಂದು ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೊದಲು ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಯ ಆಹ್ವಾನ ಬಂದಿಲ್ಲ ಎಂದರು. ಆಹ್ವಾನ ಬಂದ ಮೇಲೆ ನಾನು ಹೋಗುವುದಿಲ್ಲ ಎಂದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು. ನೀನು ಬಾ, ಅಥವಾ ಬೀಡು. ಆದರೆ ರಾಮ ಜನ್ಮಭೂಮಿಯಲ್ಲಿ ಏನೂ ನಿಲ್ಲೋದಿಲ್ಲ ಮಗನೇ ಎಂದು ನಿಂದಿಸಿದರು. ಇನ್ನು ಮೊದಲಿಗೆ ಜನವರಿ 22ಕ್ಕೆ ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ ನಂತರ ಹೋಗುತ್ತೇನೆ ಎಂದು ಹೇಳಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದರು.

Leave a Reply

Your email address will not be published. Required fields are marked *

error: Content is protected !!