ಉಡುಪಿ: ಪರ್ಯಾಯೋತ್ಸವ ಕಾಪು ವಲಯದಿಂದ ಹೊರೆಕಾಣಿಕೆ
ಕಾಪು: ಪುತ್ತಿಗೆ ವಿಶ್ವಗೀತಾ ಪರ್ಯಾಯೋತ್ಸವ ಪ್ರಯುಕ್ತ ಶನಿವಾರ ಕಾಪು ವಲಯ ವತಿಯಿಂದ ಹೊರೆಕಾಣಿಕೆ ಸಮರ್ಪಣೆ ಜರುಗಿತು
ಕಾಪು ಶ್ರೀ ಹೊಸಮಾರಿಗುಡಿಯಿಂದ ಹೊರಟ ವಾಹನ ಶೋಭಾಯಾತ್ರೆಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು. ಬಳಿಕ ಕಾಪುವಿಂದ ಹೊರಟು ಉಡುಪಿ ಜೋಡುಕಟ್ಟೆ ತಲುಪಿ ಅಲ್ಲಿಂದ ಶ್ರೀಕೃಷ್ಣ ಮಠಕ್ಕೆ ಮೆರವಣಿಗೆಯ ಮೂಲಕ ಸಾಗಿ ಹಸಿರು ಹೊರೆಕಾಣಿಕೆಯನ್ನು ಶ್ರೀ ಕೃಷ್ಣ ಮುಖ್ಯಪ್ರಾಣ ದೇವರಿಗೆ ಸಮರ್ಪಿಸಲಾಯಿತು.
ಈ ಸಂದರ್ಭ ಶಾಸಕರು ಮಾತನಾಡಿ, ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ವಿಶ್ವದೆಲ್ಲಡೆ ಸಂಚರಿಸಿ ಮಠಮಂದಿರಗಳನ್ನು ಸ್ಥಾಪಿಸುವ ಮೂಲಕ ನಮ್ಮ ಸನಾತನ ಹಿಂದೂ ಧರ್ಮದ ಮೌಲ್ಯಗಳನ್ನು ವಿಶ್ವವ್ಯಾಪಿಗೊಳಿಸುವ ಕೈಂಕರ್ಯದಲ್ಲಿ ತೊಡಗಿಸಿ ಕೊಂಡಿದ್ದಾರೆ. ಅಮೆರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ, ಕೆನಡಾ, ಸಿಂಗಪುರ, ದುಬೈ ಸಹಿತ ಎಲ್ಲಾ ಕಡೆ ಹಿಂದೂ ಧರ್ಮವನ್ನು ಪಸರಿಸಿ ವಿಶ್ವಮಾನ್ಯಗೊಳಿಸಿದ್ದಾರೆ ಎಂದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಕಾಪು ವಲಯ ಹೊರೆ ಕಾಣಿಕೆ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಕಾರ್ಯಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ದಾರ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್.ಪಾಲನ್, ಗೌರವ ಸಲಹೆಗಾರರಾದ ನಿರ್ಮಲ್ ಕುಮಾರ್ ಹೆಗ್ಡೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ ಉಪಸ್ಥಿತರಿದ್ದರು.