ಉಡುಪಿ: ಹಿರಿಯ ಕಾಂಗ್ರೆಸ್ ನಾಯಕ ಅಬ್ದುಲ್ ರೆಹಮಾನ್ ನಿಧನ
ಉಡುಪಿ, ಜ.15: ಹಿರಿಯ ಕಾಂಗ್ರೆಸ್ ನಾಯಕ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅಬ್ದುಲ್ ರೆಹಮಾನ್ ಅವರು ಕಾಂಗ್ರೆಸ್ ಪಕ್ಷದ ಸಕ್ರಿಯ ನಾಯಕರಾಗಿದ್ದು, ಜಿಲ್ಲೆಯಲ್ಲಿ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ನ ಗೆಲವಿಗಾಗಿ ಬಹಳ ಶ್ರಮ ವಹಿಸಿದ್ದರು. ಮಿತಭಾಷಿ,ಸಭ್ಯ ಸಜ್ಜನ ಅಬ್ದುಲ್ ರೆಹಮಾನ್ ರವರು ಹಲವು ಸಾಮಾಜಿಕ ಸಂಘಟನೆಗಳಲ್ಲೂ ತೊಡಗಿಸಿಕೊಂಡಿದ್ದರು.