ಆನೆಗುಡ್ಡೆ ದೇವಳದಲ್ಲಿ 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಕುಂದಾಪುರ, ಜ.16: ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಬಂದಿದ್ದ ಮಹಿಳೆಯ ಚಿನ್ನಾಭರಣದ ಪರ್ಸ್ ಕಳವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಭಟ್ಕಳದ ನಾರಾಯಣ ಎಂಬವರು ಮದುವೆಯ ಪ್ರಯುಕ್ತ 51.900 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಹಾಗೂ 4 ಗ್ರಾಂ ತೂಕದ ಚಿನ್ನದ ಉಂಗುರವನ್ನು ಖರೀದಿಸಿದ್ದು, ಇವುಗಳನ್ನು ಪರ್ಸಿನಲ್ಲಿ ತುಂಬಿಸಿ ಪತ್ನಿಯ ವ್ಯಾನಿಟಿ ಬ್ಯಾಗಿನಲ್ಲಿಟ್ಟು ಡಿ.27ರಂದು ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ದೇವರ ದರ್ಶನಕ್ಕೆ ಹೋಗಿದ್ದರು.
ಮಧ್ಯಾಹ್ನ ವೇಳೆ ದೇವಸ್ಥಾನದ ಹೊರಗಡೆ ಬಂದು ನೋಡಿದಾಗ ವ್ಯಾನಿಟಿ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳ ನ್ನು ಇಟ್ಟಿದ್ದ ಪರ್ಸ್ ಕಳವಾಗಿರುವುದು ಕಂಡು ಬಂತು.
ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.