ಕಾಪು ಬಿಜೆಪಿ ಯುವ ಮೋರ್ಚಾ: ಮೋದಿ ಮತ್ತೊಮ್ಮೆ ಗೋಡೆ ಬರಹ- ಶಾಸಕ ಸುರೇಶ್ ಶೆಟ್ಟಿ ಚಾಲನೆ
ಕಾಪು: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಇಂದು ಕಾಪು ಮಂಡಲ ಬಿಜೆಪಿ ಕಚೇರಿ ಬಳಿ ಆಯೋಜಿಸಲಾದ “2024 ಮೋದಿ ಮತ್ತೊಮ್ಮೆ ಗೋಡೆ ಬರಹ”ಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಶಾಸಕರು ಮಾತನಾಡಿ ಜಗತ್ತು ಕಂಡ ಶ್ರೇಷ್ಠ ನಾಯಕ ನರೇಂದ್ರ ಮೋದಿ. ಭಾರತವನ್ನು ವಿಶ್ವಗುರುವನ್ನಾಗಿಸ ಲು ಹೊರಟ ನಾಯಕನನ್ನು ಮತ್ತೊಮ್ಮೆ ಪ್ರಧಾನಿಯಾಗಿ ನೋಡಲು ಇಡೀ ವಿಶ್ವವೇ ಕಾಯುತ್ತಿದೆ ಎಂದರು.
ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ, ಕಾಪು ಮಂಡಲ ಬಿಜೆಪಿ ಉಪಾಧ್ಯಕ್ಷರಾದ ನವೀನ್ ಎಸ್.ಕೆ, ಸುಧಾಮ ಶೆಟ್ಟಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಕಾಪು ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸುಮಾ ಶೆಟ್ಟಿ , ಕಾಪು ಪುರಸಭಾ ಮಹಾಶಕ್ತಿಕೇಂದ್ರ ಅಧ್ಯಕ್ಷ ಸಂದೀಪ್ ಶೆಟ್ಟಿ, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಅರುಣ್ ಶೆಟ್ಟಿ, ಸುರೇಶ್ ದೇವಾಡಿಗ, ಪಕ್ಷದ ಹಿರಿಯರಾದ ಮುರಳೀಧರ್ ಪೈ ,ಹೈದರ್ ಆಲಿ, ಗೌರಿ ಪೂಜಾರಿ, ಬಿಜೆಪಿ ಯುವಮೋರ್ಚಾ ಪದಾಧಿಕಾರಿ ಗಳಾದ ಸೋನು ಪಾಂಗಾಳ, ಪ್ರಕಾಶ್ ಆಚಾರ್ಯ, ರಾಜ್ ಪಡುಬಿದ್ರಿ, ಪ್ರವೀಣ್ ಕಾಪು, ಧೀರೇಶ್ ಮೂಳೂರು ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.