ಉಡುಪಿ: ಜ.26-28 ಫಲಪುಷ್ಪ ಪ್ರದರ್ಶನ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನವು ಜನವರಿ 26 ರಿಂದ 28 ರವರೆಗೆ ನಗರದ ದೊಡ್ಡಣಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಿಧಾನಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ ಪೂಜಾರಿ, ಎಸ್.ಎಲ್ ಬೋಜೇಗೌಡ, ಡಾ. ತೇಜಸ್ವಿನಿ ಗೌಡ ಹಾಗೂ ಮಂಜುನಾಥ ಭಂಡಾರಿ, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ವಿ ಸುನಿಲ್ ಕುಮಾರ್, ಗುರುರಾಜ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಶಮ್ಲಾ ಇಕ್ಬಾಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು, ತೋಟಗಾರಿಕೆ ನಿರ್ದೇಶಕ ಡಿ.ಎಸ್. ರಮೇಶ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ತೋಟಗಾರಿಕೆ ಅಪರ ನಿರ್ದೇಶಕ ಡಾ.ಪಿ.ಎಂ. ಸೊಬರದ, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಹೆಚ್.ಎಂ ನಾಗರಾಜ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!