ಬಿಲ್ಲವರ ಅವಹೇಳನ: ವೈರಲ್ ವಿಡಿಯೋ ವಿರುದ್ಧ ಕ್ರಮಕ್ಕೆ ಆಗ್ರಹ
ಉಡುಪಿ::ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ದಿನದಂದು ಉಡುಪಿಯ ಬನ್ನಂಜೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಕೇಸರಿ ಧ್ವಜ ಹಾರಿಸದೇ ಇರುವ ಬಗ್ಗೆ ಬಿಲ್ಲವನೆಂದು ಹೇಳಿಕೊಂಡ ವ್ಯಕ್ತಿಯೊಬ್ಬರು ಅವಾಚ್ಯ ಶಬ್ದಗಳಿಂದ ಬಿಲ್ಲವ ಸಮುದಾಯವನ್ನು ನಿಂದಿಸಿರುವ ಆಡಿಯೋವೊಂದು ವೈರಲ್ ಆಗಿದೆ.
ಇದೀಗ ಈ ವೈರಲ್ ಆಡಿಯೋ ವಿರುದ್ಧ ಬಿಲ್ಲವ ಸಮುದಾಯ ಗರಂ ಆಗಿದ್ದು, ಬಿಲ್ಲವನೆಂದು ಹೇಳಿಕೊಂಡು ಸಮುದಾಯವನ್ನು ನಿಂದಿಸಿರುವ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸ್ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಸಮುದಾಯದ ಬಗ್ಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿರುವ ಈತನ್ನು ಪೊಲೀಸರು ಶೀಘ್ರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿದ್ದಲ್ಲಿ ಬಿಲ್ಲವ ಸಂಘಟನೆಗಳು ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.