ಸತ್ಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸತ್ಯ, ಧರ್ಮ ಹಾಗೂ ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪೋಸ್ಟ್ ಹಾಕಿರುವ ಅವರು, ನಮ್ಮ ನಾಯಕ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.
ಗೂಂಡಾಗಳನ್ನು ಬಿಟ್ಟು ಕಲ್ಲು ಹೊಡೆಸಿ, ಬೆದರಿಕೆ ಒಡ್ಡುವ ಮೂಲಕ ಭಾರತೀಯರ ನ್ಯಾಯದ ಕೂಗನ್ನು ಅಡಗಿಸಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ. ಪ್ರಧಾನಿ ನರೇಂದ್ರ ಮೋದಿ ಅವರೇ, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ. ಅನ್ಯಾಯದ ಕಾಡ್ಗಿಚ್ಚನ್ನು ಆರಿಸಿ, ನ್ಯಾಯದ ಹಣತೆ ಬೆಳಗುವ ವರೆಗೆ ನಾವು ವಿರಮಿಸುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.