ಉಡುಪಿ: ಜ.26ರಂದು ಬೃಹತ್ ರಕ್ತದಾನ ಶಿಬಿರ
ಉಡುಪಿ ಜ.24(ಉಡುಪಿ ಟೈಮ್ಸ್ ವರದಿ): ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ಉಡುಪಿ ಜಿಲ್ಲೆ, ಯಶೋಧ ಆಟೋ ಯೂನಿಯನ್ ಉಡುಪಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಸಮಾಜ ಸೇವಕರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮುಲ್ಕಿ ಇವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿರುವ ಮಥುರಾ ಕಂಫರ್ಟ್ಸ್ನಲ್ಲಿ ಜ.26ರಂದು ಬೆಳಿಗ್ಗೆ “ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಈ ಬೃಹತ್ ರಕ್ತದಾನ ಶಿಬಿರವು ಬೆಳಿಗ್ಗೆ 8.30 ರಿಂದ ಆರಂಭಗೊಂಡು ಮಧ್ಯಾಹ್ನ 3.30 ರವರೆಗೆ ನಡೆಯಲಿದೆ. ಇದರ ಸಭಾ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ 9845199597, 9986668476, 9964676090, 6364541071, 9886591952, 9986135565 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.