ಕುಂದಾಪುರ: ಬೈಕ್ ಕಳವು ಪ್ರಕರಣ- ಆರೋಪಿ ಬಂಧನ
ಕುಂದಾಪುರ, ಜ.25: ಬೈಕ್ ಕಳವು ಪ್ರಕರಣದ ಆರೋಪಿಯೊಬ್ಬನನ್ನು ಕುಂದಾಪುರ ಪೊಲೀಸರು ಬೈಂದೂರು ಜಂಕ್ಷನ್ ಬಳಿ ಬಂಧಿಸಿದ್ದಾರೆ.
ಕಾಲ್ತೋಡು ಗ್ರಾಮದ ರಂಜಿತ್ (25) ಬಂಧಿತ ಆರೋಪಿ. ಕುಂದಾಪುರ ಶಾಸ್ತ್ರಿ ವೃತ್ತದ ಬಳಿಯ ಕಾಲೇಜು ರಸ್ತೆಯ ಸರಕಾರಿ ನೌಕರರ ಸಂಘದ ಕಟ್ಟಡದ ಬಳಿ ಅನಂತ ಎಂಬವರು ನ.26ರಂದು ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊಂಡ ಕುಂದಾಪುರ ಪೊಲೀಸ್ ನಿರೀಕ್ಷಕ ಯು.ಬಿ ನಂದಕುಮಾರ್, ಎಸ್ಸೈಗಳಾದ ವಿನಯ ಕೊರ್ಲಹಳ್ಳಿ, ಪ್ರಸಾದ್ ಕುಮಾರ್.ಕೆ ಹಾಗೂ ಸಿಬ್ಬಂದಿ ಸಂತೋಷ ಕುಮಾರ್, ಶ್ರೀಧರ್, ರಾಮ ಹಾಗೂ ಬೈಂದೂರು ಠಾಣಾ ಅಪರಾಧ ವಿಭಾಗದ ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ಕಳವು ಮಾಡಿದ ಬೈಕನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಮಾರು 5 ಕ್ಕೂ ಹೆಚ್ಚು ಬೈಕ್ ಕಳ್ಳತನ ಪ್ರಕರಣಗಳು ದಾಖಲಾಗಿದೆ ಎಂದು ತನಿಖೆ ವೇಳೆ ತಿಳಿದಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.