ಕಾಂಗ್ರೆಸ್ಗೆ ಗುಡ್ ಬೈ ಹೇಳಿ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಶೆಟ್ಟರ್
ನವದೆಹಲಿ: ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಗುರುವಾರ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.
ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರನಾಯಕರನ್ನು ಭೇಟಿ ಮಾಡಿದ ನಂತರ ಬಿಜೆಪಿಗೆ ಮತ್ತೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ತೊರೆದಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಈ ವಿಷಯ ತಿಳಿಸಿದ್ದಾರೆ.