ಉಡುಪಿ: ಮಹಿಳೆಯ 50 ಸಾವಿರ ರೂ.ಮರಳಿಸಿ ಮಾನವೀಯತೆ ಮೆರೆದ ರಿಕ್ಷಾ ಚಾಲಕ
ಉಡುಪಿ: (ಉಡುಪಿ ಟೈಮ್ಸ್ ವರದಿ)ಬುಧವಾರ ಬೆಳಗ್ಗೆ ಕುರ್ಕಾಲಿನಿಂದ ಮಹಿಳೆಯೊಬ್ಬರು ಆಟೋರಿಕ್ಷಾದಲ್ಲಿ ಕಟಪಾಡಿ ಪೇಟೆಗೆ ಬಂದಿದ್ದು, ಇಳಿಯುವಾಗ ಗಡಿಬಿಡಿಯಲ್ಲಿ 50ಸಾವಿರ ರೂಪಾಯಿ ಹಣವನ್ನು ಮರೆತು ರಿಕ್ಷಾದಲ್ಲೇ ಬಿಟ್ಟುಹೋಗಿದ್ದರು.
ಮಹಿಳೆಯನ್ನು ಬಸ್ಸ್ಟ್ಯಾಂಡಿನಲ್ಲಿ ಬಿಟ್ಟು ಉಡುಪಿಯ ಕಾರ್ತಿಕ್ ಎಸ್ಟೇಟ್ ಸಮೀಪದ ಆಟೋ ಸ್ಟ್ಯಾಂಡಿಗೆ ಮರಳಿದ್ದ ರಿಕ್ಷಾ ಚಾಲಕ ಜಯ ಶೆಟ್ಟಿ ,
ಆಟೋ ಸೀಟ್ನಲ್ಲಿ ಪ್ಲಾಸ್ಟಿಕ್ ಇರುವುದನ್ನು ಗಮನಿಸಿದರು. ತೆರೆದಾಗ ಅದರಲ್ಲಿ 50ಸಾವಿರ ಹಣವಿತ್ತು. ಆ ಕೂಡಲೇ ಉಡುಪಿಯಿಂದ ಕಟಪಾಡಿಗೆ ಬಂದು ಕುರ್ಕಾಲಿನ ಮಹಿಳೆಯನ್ನು ಸಂಪರ್ಕಿಸಿ, ಹಣವನ್ನು ಮರಳಿಸಿ ಮಾನವೀಯತೆ ಮೆರೆದರು.
ಆಟೋ ರಿಕ್ಷಾ ಚಾಲಕರ ಮಾನವೀಯ ಗುಣವನ್ನು ಹಾಗೂ ಅವರು ಮಾಡಿದ ಉಪಕಾರವನ್ನು ಮಹಿಳೆ ಹಾಗೂ ಕಟಪಾಡಿಯ ಸಾರ್ವಜನಿಕರು ಮೆಚ್ಚಿಕೊಂಡಿದ್ದಾರೆ. ಆಟೋರಿಕ್ಷಾ ಚಾಲಕ ಜಯ ಶೆಟ್ಟಿ ಅವರ ಈ ಕೆಲಸ ಇತರರಿಗೆ ಮಾದರಿಯೆನಿಸಿದೆ.
Good luck. God bless auto driver Jayashetty and his family for the humane service done by him.
Excellent work done by Mr Jaya Shetty. May God bless him and his family.