ಪುತ್ತೂರು: ಅರುಣ್ ಪುತ್ತಿಲ ಮತ್ತೆ ಬಿಜೆಪಿ ಸೇರ್ಪಡೆ ಸಾಧ್ಯತೆ?

ಬೆಂಗಳೂರು: ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಿಂದೂ ಹೋರಾಟಗಾರ ಅರುಣ್ ಪುತ್ತಿಲ ಅವರು ಮತ್ತೆ ಬಿಜೆಪಿಗೆ ಸೇರುವುದು ಬಹುತೇಕ ಖಚಿತವಾಗಿದೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಹತ್ವದ ಚರ್ಚೆ ನಡೆಯುತ್ತಿದೆಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಈ ಬಗ್ಗೆ ಪುತ್ತೂರಿನಲ್ಲಿ ಬಿಜೆಪಿಯ ಹಿರಿಯ ನಾಯಕರ ಜತೆ ಮಾತುಕತೆ ನಡೆದಿದ್ದು, ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ.ಬ್ರಿಜೇಶ್ ಚೌಟ ಅವರು ಪುತ್ತೂರಿಗೆ ಬಂದ ಬಳಿಕ ಈ ಬೆಳವಣಿಗೆ ನಡೆದಿದೆ. ಅರುಣ್ ಪುತ್ತಿಲ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಒಂದು ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮತ್ತೆ ನಳಿನ್ ಕುಮಾರ್‌ಗೆ ಟಿಕೆಟ್ ನೀಡಿದರೆ ಪುತ್ತಿಲ ಪರಿವಾರದ ಅಭಿಮಾನಿಗಳು ಅರುಣ್ ಕುಮಾರ್ ಪುತ್ತಿಲ ಅವರನ್ನು ಕಣಕ್ಕೆ ಇಳಿಸಲು ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ಬಿಜೆಪಿ ಮುಖಂಡರು ಅರುಣ್ ಪುತ್ತಿಲ ಜೊತೆ ಸಂಧಾನ ಸಭೆ ನಡೆಸಿ ಮತ್ತೆ ಪಕ್ಷಕ್ಕೆ ಬರಮಾಡಿಕೊಳ್ಳವ ಸಾಧ್ಯತೆ ಇದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!