ದ್ವಿಚಕ್ರ ವಾಹನ- ಟಿಪ್ಪರ್ ನಡುವೆ ಅಪಘಾತ: ಶಿಕ್ಷಕಿ ಮೃತ್ಯು

ಪುತ್ತೂರು, ಜ 29: ಮುರ ಸಮೀಪದ ಪೋಳ್ಯದಲ್ಲಿ ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿ ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ವಿಸ್ಡಮ್ ಆಂಗ್ಲ ಮಧ್ಯಮ ಶಾಲಾ ಶಿಕ್ಷಕಿ ಅನಿತಾ ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿ ತನ್ನ ಮಗುವಿನೊಂದಿಗೆ ಸಂಚರಿಸುತ್ತಿದ್ದ ಅನಿತಾ ಅವರು, ಟಿಪ್ಪರ್ ಅಡಿಗೆ ಬಿದ್ದು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನು ಮಗುವಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ತರಲಾಗಿದೆ.

Leave a Reply

Your email address will not be published. Required fields are marked *

error: Content is protected !!