ಗಂಗೊಳ್ಳಿ: ಮದ್ಯ ಮಾರಾಟ ನಿಷೇಧ
ಉಡುಪಿ, ಜ.29: ಗಂಗೊಳ್ಳಿ ಗ್ರಾಮದ ಖಾರ್ವಿಕೇರಿ ಕೆರೆ ಮಹಾಕಾಳಿ ಅಮ್ಮನವರ ದೇವಾಸ್ಥಾನದ ಮಾರಿ ಜಾತ್ರೆ
ನಡೆಯುತ್ತಿರುವ ಹಿನ್ನಲೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ದೃಷ್ಟಿಯಿಂದ ಜನವರಿ 30 ರ ಬೆಳಗ್ಗೆ 6 ಗಂಟೆಯಿ0ದ ಜ. 31 ರ ರಾತ್ರಿ 12 ಗಂಟೆಯವರೆಗೆ ಕರ್ನಾಟಕ ಅಬಕಾರಿ ನಿಯಮಗಳ 1968 ರನಿಯಮ 3ರಡಿ ನೀಡಿರುವ ಮದ್ಯ ಮಾರಾಟ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರ ಅನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಗಂಗೋಳ್ಳಿ ಹಾಗೂ ಗುಜ್ಜಾಡಿ ಗ್ರಾಮ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮದ್ಯ ಅಂಗಡಿಯನ್ನು ಮುಚ್ಚಲು ಹಾಗೂ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ