ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪಿ.ಎಸ್.ದಿನೇಶ್ ಕುಮಾರ್ ನೇಮಕ- ವಕೀಲರ ಸಂಘದಿಂದ ಅಭಿನಂದನೆ
ಉಡುಪಿ: ಕರ್ನಾಟಕ ಉಚ್ಛ ನ್ಯಾಯಾಲಯದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಇವರನ್ನು ಇಂದು ಉಡುಪಿ ವಕೀಲರ ಸಂಘದ ವತಿಯಿಂದ ಪುಷ್ಪಗುಚ್ಛ ನೀಡಿ ಅಭಿನಂದಿಸಲಾಯಿತು.
ಬಳಿಕ ಫೆಬ್ರವರಿ 10ರಂದು ಉಡುಪಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯ ಆವರಣದಲ್ಲಿ ವಕೀಲರಿಗಾಗಿ ಆಯೋಜಿಸಿರುವ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕೂಟ “ಕಲಾ ಸಂಭ್ರಮ”ವನ್ನು ಉದ್ಘಾಟಿಸುವಂತೆ ಆಹ್ವಾನಿಸಿ, ಅವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ರೆನೋಲ್ಡ್ ಪ್ರವೀಣ್ ಕುಮಾರ್, ಸೀನಿಯರ್ಸ್ ಕಮಿಟಿ ಸದಸ್ಯರಾದ ಆನಂದ ಮಡಿವಾಳ,ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರು ಸುಕೇಶ್ ಶೆಟ್ಟಿ ಹಾಗೂ ಹಿರಿಯ ನ್ಯಾಯವಾದಿಗಳಾದ ಕೆ.ಸಿ.ಎಂ.ಭಕ್ತ ಉಪಸ್ಥಿತರಿದ್ದರು.