ಕುಂದಾಪುರ: ವಂಡ್ಸೆಯ ಮಹಿಳೆ ನಾಪತ್ತೆ

ಉಡುಪಿ, ಫೆ. 01: ಕುಂದಾಪುರ ತಾಲೂಕು ವಂಡ್ಸೆ ಗ್ರಾಮದ ನಿವಾಸಿ ಆಪ್ಸಾನಾ (23) ಎಂಬ ಮಹಿಳೆಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 4 ಇಂಚು ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಶರೀರ, ಹೊಂದಿದ್ದು, ಉರ್ದು, ಹಿಂದಿ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೊಲ್ಲೂರು ಪೊಲೀಸ್ ಠಾಣೆ ದೂ.ಸಂ:08254-258233, ಮೊ.ನಂ: 9480805460, ಬೈಂದೂರು ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 08254-251031, ಮೊ.ನಂ: 9480805434 ಅಥವಾ ಕಂಟ್ರೋಲ್ ರೂಂ ದೂ.ಸಂ :0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!