ಎಲ್.ಕೆ ಅಡ್ವಾಣಿ ಅವರಿಗೆ ‘ಭಾರತ ರತ್ನ’ ಘೋಷಣೆ
ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ʼಭಾರತ ರತ್ನʼ ನೀಡಲಾಗುವುದು ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
“ಎಲ್.ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಕಟಿಸಲು ನನಗೆ ತುಂಬಾ ಸಂತೋಷವಾಗಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ. ಈ ಗೌರವಕ್ಕೆ ಅವರನ್ನು ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ನೆನಪಿನಲ್ಲಿ ಉಳಿಯುವಂಥದ್ದು. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಸಚಿವರಾಗಿಯೂ ಗುರುತಿಸಿಕೊಂಡರು. ಶ್ರೀಮಂತ ಒಳನೋಟಗಳಿಂದ ತುಂಬಿದ ಅವರ ಸಂಸದೀಯ ನಡೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ” ಎಂದು ಪ್ರಧಾನಿ ಮೋದಿ x ನಲ್ಲಿನ ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.
ಅಡ್ವಾಣಿಯವರಿಗೆ ಭಾರತ ರತ್ನ: ಪೇಜಾವರಶ್ರೀ ಹರ್ಷ