ವಿಶಾಲ ಗಾಣಿಗ ಕೊಲೆ ಪ್ರಕರಣ- ದುಬೈನಲ್ಲಿ ತಲೆಮರೆಸಿಕೊಂಡ 4ನೇ ಆರೋಪಿ ಬಂಧನ
ಬ್ರಹ್ಮಾವರ: 2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕುಮ್ರಗೋಡು ವಿಶಾಲ ಗಾಣಿಗ ಕೊಲೆ ಪ್ರಕರಣದ ತಲೆಮರೆಸಿಕೊಂಡಿದ್ದ 4ನೇ ಆರೋಪಿಯನ್ನು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಹ್ಮಾವರ ಠಾಣಾ ಪಿಎಸ್ಐ ಮಧು ಬಿ. ಇ ನೇತೃತ್ವದ ತಂಡ ವಶಕ್ಕೆ ಪಡೆದಿದೆ.
ಬ್ರಹ್ಮಾವರ ಕುಮ್ರಗೋಡಿನ ವಿಶಾಲ ಗಾಣಿಗರನ್ನು ಪತಿ ರಾಮಕೃಷ್ಣ ಗಾಣಿಗ ವಿದೇಶದಲ್ಲಿ ಸಂಚು ರೂಪಿಸಿ ಸುಫಾರಿ ಕಿಲ್ಲರ್ ಮೂಲಕ ಕೊಲೆಗೈದಿದ್ದ.
ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿಯಾದ ಧರ್ಮೇಂದ್ರ ಕುಮಾರ್ ಸುಹಾನಿ ಈತನು ಪ್ರಕರಣ ದಾಖಲಾದ ವಿಚಾರ ತಿಳಿದು 3 ವರ್ಷಗಳಿಂದ ದುಬೈಯಲ್ಲಿ ತಲೆಮರೆಸಿಕೊಂಡಿದ್ದನು. ಈತ ವಿದೇಶದಿಂದ ಬರುವ ಮಾಹಿತಿ ಪಡೆದ ಬ್ರಹ್ಮಾವರ ಪೊಲೀಸರು ಆತನನ್ನು ಲಕ್ನೋ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಆರೋಪಿಯ ಬಂಧನಕ್ಕೆ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್ಐ, ಸುರೇಶ ಬಾಬುರವರ ಸಹಕರಿಸಿರುತ್ತಾರೆ.
ಆರೋಪಿತರಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಇವರುಗಳನ್ನು ಈಗಾಗಲೆ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿದ್ದಾರೆ.