ಶಿಕ್ಷಕರು ಮಕ್ಕಳ ಶಿಕ್ಷಣದ ಹೊರತಾಗಿ ಬೇರೆ ವ್ಯವಹಾರ ಮಾಡಿದರೆ ನಿರ್ದಾಕ್ಷಿಣ್ಯ ಕ್ರಮ- ಸಚಿವ ಮಧು ಬಂಗಾರಪ್ಪ

ಕುಂದಾಪುರ, ಫೆ 05: ಮಕ್ಕಳೆಂದರೆ ದೇವರು. 76 ಸಾವಿರ ಶಾಲೆಗಳಲ್ಲಿ ಓದುವ 1 ಕೋಟಿ 20 ಲಕ್ಷ ವಿದ್ಯಾರ್ಥಿಗಳ ಸೇವೆ ಮಾಡುವ ಭಾಗ್ಯ ನನಗೆ ಸಿಕ್ಕಿದೆ. ಶಿಕ್ಷಣ ಇಲಾಖೆಯ ಹಣ ಮಕ್ಕಳ ಶಿಕ್ಷಣಕ್ಕೆ ಮೀಸಲಾಗಿರುತ್ತದೆ. ಶಿಕ್ಷಕರು ಮಕ್ಕಳ ಶಿಕ್ಷಣ ದೈಹಿಕ ಶಿಕ್ಷಣದ ಹೊರತಾಗಿ ಬೇರೆ ವ್ಯವಹಾರಗಳ ಕಡೆಗೆ ತಲೆ ಹಾಕಿದರೆ ಅದನ್ನು ನಿಯಂತ್ರಿಸುವುದು ಹೇಗೆಂದು ನನಗೆ ಗೊತ್ತಿದೆ ಮತ್ತು ಅಂತಹಾ ಶಿಕ್ಷಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಕೊಲ್ಲೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ನಮ್ಮ ಸರ್ಕಾರ ಮಕ್ಕಳ ಪೌಷ್ಟಿಕತೆಗೆ ಆದ್ಯತೆ ನೀಡಿದ್ದು, ಪ್ರತಿ ದಿನ ಎರಡು ಮೊಟ್ಟೆ ನೀಡಲಾಗುತ್ತಿದೆ. ಪ್ರತೀ ವರ್ಷ 500 ಶಾಲೆಯಂತೆ 3000 ಕೆಪಿಎಸ್ ಶಾಲೆಗಳನ್ನು ತೆರುವು ಯೋಜನೆ ಇದೆ ಎಂದರು. ಸರ್ಕಾರಿ ಶಾಲೆಯ ಮಕ್ಕಳಿ ನೀಟ್ ಕೋಚಿಂಗ್ ಉಚಿತವಾಗಿ ನೀಡುವ ಯೋಜನೆಯ ಬಗ್ಗೆ ಚಿಂತಿಸಲಾಗುತ್ತಿದೆ ಎಂದರು.ಪ್ರಣಾಳಿಕೆ ಉಪಾಧ್ಯಕ್ಷನಾಗಿದ್ದ ಖುಷಿ ಇದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿ ರಾಜಕೀಯ ಮಾಡುತ್ತಿದೆ. ಅಯೋಧ್ಯಾ ರಾಮ ನಮ್ಮದು ಎಂದು ಬಿಂಬಿಸಿ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ ನಾವು ಹೇಳುತ್ತೇವೆ ದೇಶದ ಉಳಿದೆಲ್ಲಾ ರಾಮ ನಮ್ಮದು. ಈ ಬಾರಿ ಕಾರವಾರ, ಉಡುಪಿ ಚಿಕ್ಕ ಮಗಳೂರು, ದಕ್ಷಿಣ ಕನ್ನಡ ಚುನಾವಣೆ ಉಸ್ತುವಾರಿ ನಾನು ವಹಿಸಿದ್ದು, ಮೂರು ಕ್ಷೇತ್ರಗಳಲ್ಲಿ ಯಾರೇ ಅಭ್ಯರ್ಥಿಗಳಾದರೂ ಒಮ್ಮತದಿಂದ ಚುನಾವಣೆ ಎದುರಿಸಿ ಗೆಲವು ಸಾಧಿಸುತ್ತೇವೆ ಎಂದು ಹೇಳಿದರು.

ನಾರಾಯಣ ಗುರುಗಳ ಅಕಾಡೆಮಿ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ ಎಂದ ಅವರು, ಹಿಂದುಳಿದ ವರ್ಗಗಳ ಆಯೋಗದ ವರದಿ ಜಾರಿಗೆ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು. ಸುದ್ಧಿಗೋಷ್ಟಿಯಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ ಪೂಜಾರಿ ಹಾಗೂ ಹಿರಿಯ ಮುಖಂಡರಾದ ರಾಜು ಪೂಜಾರಿ ಮತ್ತು ಬಾಬು ಹೆಗ್ಡೆ, ರಮೇಶ್ ಗಾಣಿಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!