ಉಡುಪಿ: ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ನಿಧನ
ಉಡುಪಿ: ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಅಲ್ಪಕಾಲದ ಅಸೌಖ್ಯದಿಂದ ಇದ್ದ ಪ್ರಕಾಶ್ ಶೆಟ್ಟಿ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ದೆಂದೂರುಕಟ್ಟೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಗಡುವಾಡು ಶ್ರೀಧೂಮಾವತಿ ದೈವಸ್ಥಾನ ನೇಮೋತ್ಸವ ಸಮಿತಿಯ ಅಧ್ಯಕ್ಷರಾಗಿ, ಮಣಿಪುರ ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷರಾಗಿ ಹಾಗೂ ಪ್ರಸ್ತುತ ಮಣಿಪುರ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ತುಳು ನಾಟಕ ರಚನೆಕಾರಿಗದ್ದ ಇವರು ಹಲವರು ನಾಟಕಗಳಲ್ಲಿ ಪಾತ್ರವನ್ನೂ ಕೂಡ ನಿರ್ವಹಿಸಿದ್ದರು. ಗ್ರಾಮೀಣ ಬಂಟರ ಸಂಘ, ರೋಟರಿ ಕ್ಲಬ್ನ ಸಕ್ರೀಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಗುತ್ತಿಗೆದಾರರಾಗಿ, ಕೆಮ್ತೂರಿನ ಕ್ರಶರ್ ಉದ್ಯಮ ನಡೆಸುತ್ತಿದ್ದ ಪ್ರಕಾಶ್ ಶೆಟ್ಟಿ ಅವರು ಪತ್ನಿ, ಇಬ್ಬರು ಪುತ್ರಿಯರು,ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.