ಹೆಬ್ರಿ: ಕೋಳಿ ಅಂಕಕ್ಕೆ ದಾಳಿ- 12 ಮಂದಿ ವಶಕ್ಕೆ
ಹೆಬ್ರಿ ಫೆ.5(ಉಡುಪಿ ಟೈಮ್ಸ್ ವರದಿ): ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ಮಾಡಿದ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಹೆಬ್ರಿಯ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಹಣವನ್ನು ಪಣವಾಗಿಟ್ಟುಕೊಂಡು ಕೋಳಿ ಅಂಕ ನಡೆಸುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಸ್ಥಳಕ್ಕೆ ದಾಳಿ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ರತ್ನಾಕರ, ವಿದ್ಯಾನಂದ, ನವೀನ, ರಾಘವೇಂದ್ರ , ಸಂದೀಪ, ಗುರುಕಿರಣ, ಶಿವ ಕುಮಾರ, ಶರಣ, ಪ್ರಶಾಂತ, ರವೀಂದ್ರ, ಅಣ್ಣಪ್ಪ, ಸತೀಶ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ದಾಳಿ ವೇಳೆ ಕೆಲವರು ಸ್ಥಳದಿಂದ ಪರಾರಿಯಾಗಿದ್ದು, ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.