ಕುಂದಾಪುರ: ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆ- ಶಾಲಾ ವಾರ್ಷಿಕೋತ್ಸವ

ಕುಂದಾಪುರ: ವಿದ್ಯಾ ಅಕಾಡೆಮಿ ಮೂಡ್ಲಕಟ್ಟೆಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜ್ರಂಬಣೆಯಿಂದ ಜರುಗಿತು. ಮುಖ್ಯ ಅತಿಥಿಯಾಗಿ ಪೂರ್ಣಿಮಾ ಭಟ್ ಕಮಲಶಿಲೆ ಇವರು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರು ಮಾತನಾಡುತ್ತಾ ಯಶಸ್ಸು ಒಂದು ಶಾಲೆಯು ಕಾಣಬೇಕಾದರೆ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪೋಷಕರಲ್ಲಿ ಹೊಂದಾಣಿಕೆ ಇರಬೇಕು ಎಂದರು.

ಮಕ್ಕಳನ್ನು ಸ್ವಾವಲಂಬಿಗಳಾಗಲು ಹುರಿದುಂಬಿಸ ಬೇಕು. ಶಿಕ್ಷಕರಾದವರು ಕ್ಲಿಷ್ಟಕರವಾದದನ್ನು ಮಕ್ಕಳಿಗೆ ಸರಳಿಕರಿಸಿ ಹೇಳುವ ಸಾಮರ್ಥ್ಯವನ್ನು ಪಡೆದಿರಬೇಕು ಹಾಗೂ ನಿಷ್ಪಕ್ಷಪಾತಿಗಳಾಗಿರಬೇಕು ಎಂದರು. ಮಕ್ಕಳನ್ನು ಬೆಳೆಸುವುದರ ಬಗ್ಗೆ ಪೋಷಕರಿಗೆ ಕಿವಿ ಮಾತುಗಳನ್ನು ಹೇಳಿದರು. ನಂತರ ಮುಂದಿನ ಶೈಕ್ಷಣಿಕ ವರ್ಷಕ್ಕೆ ಮಕ್ಕಳ ಪದೋನ್ನತಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಸಭಾ ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿಯಾದ ಸಂಗೀತ ಇವರು ನಡೆಸಿಕೊಟ್ಟರು. ಶಿಕ್ಷಕಿ ಸೋಫಿಯಾ ಅವರು ಸ್ವಾಗತಿಸಿದರು. ಶಾಲೆಯ ಆಡಳಿತ ನಿರ್ವಾಹಕಿಯಾದ ಪಾವನ ಮಹೇಶ್ ಅವರು ವಾರ್ಷಿಕ ವರದಿಯನ್ನು ವಾಚಿಸಿದರು. ಶಿಕ್ಷಕಿ ರಷ್ಮಾ ಶೆಟ್ಟಿಯವರು ಧನ್ಯವಾದ ಸಮರ್ಪಿಸಿದರು.

ನಂತರ ಮಕ್ಕಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಐಎಂಜೆಐಎಸ್‌ಸಿ ಯ ಪ್ರಾಂಶುಪಾಲೆಯಾದ ಡಾಕ್ಟರ್ ಪ್ರತಿಭಾ ಎಂ ಪಟೇಲ್, ಶಾಲೆಯ ಶಿಕ್ಷಕರೂ ವಿದ್ಯಾರ್ಥಿಗಳು ಪೋಷಕರು ಹಾಗೂ ಎಲ್ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!