ಚಿಕ್ಕಮಗಳೂರು: ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಆತ್ಮಹತ್ಯೆ
ಚಿಕ್ಕಮಗಳೂರು: ನೇಣು ಬಿಗಿದು ಕೊಂಡು ಆತ್ಮಹತ್ಯೆ ಯತ್ನಿಸಿದ್ದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್ (24) ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿರುವ ಘಟನೆ ನಗರದ ಹೊರವಲಯದ ತೇಗೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಹೆಂಡತಿ ಬಿಟ್ಟು ಹೋದಳೆಂದು ಮನನೊಂದ ವಿನೋದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ತೇಗೂರು ಗ್ರಾಮದ ಯುವತಿ ಹಾಗೂ ವಿನೋದ್ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿ.10 ರಂದು ವಿನೋದ್ ಹಾಗೂ ಯುವತಿ ಮದುವೆಯಾಗಿದ್ದರು ಎನ್ನಲಾಗಿದೆ.
ಪರಸ್ಪರ ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು, ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
Girl above 18 ? Boy already above 21.what is panchayat? They don’t have democracy? For his death panchayat chief and police are responsible. For his death this two persons are to be booked under section 302