ಕೋಟಿ ಗೀತಾ ಲೇಖನ ಯಜ್ಞ- ಉ.ಪ್ರದೇಶ ಸಿಎಂ ಯೋಗಿಯವರಿಗೆ ಆಹ್ವಾನ

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಮ್ಮ ಚತುರ್ಥ ಕೃಷ್ಣಪೂಜಾ ಪರ್ಯಾಯದ ಅವಧಿಯಲ್ಲಿ ಕೋಟಿ ಗೀತಾ ಲೇಖನ ಯಜ್ಞದ ಮೊದಲ ಹಂತವಾಗಿ ಲಕ್ಷ ಗೀತಾ ಲೇಖನಗಳ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅಪೇಕ್ಷಿಸಿ ಉತ್ತರಪ್ರದೇಶ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಹ್ವಾನಿಸುವ ಸಲುವಾಗಿ ಶ್ರೀಗಳ ಸೂಚನೆಯಂತೆ ಪರ್ಯಾಯ ಸಮಿತಿ ಕಾರ್ಯಾಧ್ಯಕ್ಷ ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಮಂಗಳವಾರ ಲಕ್ನೋದಲ್ಲಿ ಯೋಗೀಜಿಯವರನ್ನು ಭೇಟಿ ಮಾಡಿ ಶ್ರೀಗಳ ಬಿನ್ನಹವನ್ನು ಅರ್ಪಿಸಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಯೋಗೀಜಿಯವರು ಶ್ರೀಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಕೋಟಿಗೀತಾ ಲೇಖನ ಯಜ್ಞವನ್ನು ಮುಕ್ತವಾಗಿ ಪ್ರಶಂಸಿಸಿ ತಮ್ಮನ್ನು ಆಹ್ವಾನಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು. ಪೇಜಾವರ ಶ್ರೀಗಳ ಆಪ್ತರಾದ ವಾಸುದೇವ ಭಟ್ ಪೆರಂಪಳ್ಳಿ, ಬಿಜೆಪಿ ಪ್ರಮುಖರಾದ ಮಹೇಶ್ ಠಾಕೂರ್, ಸುವರ್ಧನ್ ನಾಯಕ್ ಉಪಸ್ಥಿತರಿದ್ದರು.