ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ : ಉಡುಪಿ ಜಿಲ್ಲಾ ಪ್ರತಿಭಾ ಪುರಸ್ಕಾರ
ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಉಡುಪಿ ಜಿಲ್ಲೆ ಇದರ ವತಿಯಿಂದ Sslc ಮತ್ತು PUc ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಸಹಯೋಗದೊಂದಿಗೆ ಅಟಲ್ ಬಿಹಾರಿ ವಾಜಪೇಯಿ ಸಭಾ ಭವನದಲ್ಲಿ ಜಿಲ್ಲಾಧ್ಯಕ್ಷ ಕೆ ದಿನಕರ ಶೆಟ್ಟಿ ಅಂಪಾರು ಇವರ ಅಧ್ಯಕ್ಷತೆಯಲ್ಲಿ ಮಂಗಳವಾರ ನೆರವೇರಿತು
ಕಾರ್ಯಕ್ರಮವನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಉದ್ಘಾಟನೆ ಮಾಡಿ ಪ್ರತಿಭಾ ಪುರಸ್ಕಾರದ ಬಗ್ಗೆ ವಿವರವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬುವುದರೊ0ದಿಗೆ 7ನೇ ವೇತನ ಆಯೋಗ, OPS ನೌಕರರನನ್ನು NPS ಗೆ ತರುವ ಬಗ್ಗೆ ಮತ್ತು ಆರೋಗ್ಯ ಸಂಜೀವಿನಿಯನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊ0ದಿಗೆ ಚರ್ಚಿಸಿದ್ದು ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಇದೇ ತಿಂಗಳು 27ನೇ ತಾರೀಖಿಗೆ ಸಮ್ಮೇಳನಕ್ಕೆ ದಿನಾಂಕ ನಿಗಧಿಪಡಿಸಿರುವುದನ್ನು ಸಭೆಯಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ಇವರು ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ SSlc ಮತ್ತು PUc ವಿದ್ಯಾರ್ಥಿಗಳ ಜೀವನದ ಭವಿಷ್ಯದ ಘಟ್ಟ ಈ ಕಾಲವನ್ನು ಸರಿಪಡಿಸಿಕೊಂಡರೆ ಮುಂದಿನ ಜೀವನ ಉಜ್ವಲವಾಗುವುದನ್ನು ಒತ್ತಿ ಹೇಳಿದರು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ತುಂಬಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ರವರು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಹೇಗೆ ಹಂತ ಹಂತವಾಗಿ ಮೇಲೆ ಬರಬೇಕು ಅದಕ್ಕೆ ಬೇಕಾದ ಮನೋಸ್ಥೆರ್ಯವನ್ನು ಬೆಳೆಸಿಕೊಳ್ಳುವುದು ಹೇಗೆ ಎಂದು ತಿಳಿಸಿದರು.
ರಾಜ್ಯ ಸಂಘದ ಉಪಾಧ್ಯಕ್ಷ ಎಂ.ವಿ ರುದ್ರಪ್ಪ, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಉಪಾಧ್ಯಕ್ಷ ಬಸವರಾಜು ಎಸ್ , ಉಪಾಧ್ಯಕ್ಷ ಆರ್. ಮೋಹನ್ ಕುಮಾರ್, ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಗಣಪತಿ ಕೆ, ಡಿ.ಹೆಚ್.ಓ ಡಾ. ಈಶ್ವರಪ್ಪ ಗಡಾದ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಸ್ಪೂರ್ತಿ ತುಂಬಿದರು. ಜಿಲ್ಲಾ ಉಪಾಧ್ಯಕ್ಷ ಪ್ರಶಾಂತ ಶೆಟ್ಟಿ ನಿರೂಪಿಸಿದರು. ಮಂಜುಳಾ ಜಯಕರ ಪ್ರಾರ್ಥಿಸಿದರು ಜಿಲ್ಲಾ ಕಾರ್ಯದರ್ಶಿ ಕೃಷ್ಣಯ್ಯ ವಂದಿಸಿದರು.