ಪರಶುರಾಮ ಥೀಂ ಪಾರ್ಕ್ ಕಾಮಗಾರಿ ಭ್ರಷ್ಟಾಚಾರ- ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಪರಶುರಾಮ ಥೀಂ ಪಾರ್ಕ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ಹಾಗೂ ಕಳಪೆ ಕಾಮಗಾರಿ ನಡೆದು ಹಾಗೂ ಧಾರ್ಮಿಕ ಭಾವನೆಗಳಿಗೆ ಅಪಚಾರವಾಗಿರುತ್ತಿರುವ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಯ ಸಿ.ಐ.ಡಿ. ಅಥವಾ ಉನ್ನತ ಮಟ್ಟದ ತನಿಖಾ ಸಂಸ್ಥೆಗೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳವಂತೆ ಸೂಚಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನಲ್ಲಿರುವ ಬಗ್ಗೆ ಪರ/ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ವಿವಿಧ ದೃಶ್ಯ ಮಾಧ್ಯಮ ಮತ್ತು ದಿನ ಪತ್ರಿಕೆಗಳು ವರದಿ ಮಾಡಿರುವುದಾಗಿ ತಿಳಿದುಬಂದಿದ್ದು ಈ ಬಗ್ಗೆ ಸಮಗ್ರ ತನಿಖೆಗೆ ಆಗ್ರಹಿಸಿ ಪತ್ರ ಬರೆದಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಓ.ಡಿ. ವತಿಯಿಂದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!