ಗಾಂಜಾ ಸೇವನೆ ಪ್ರಕರಣ: ಸಾಸ್ತಾನದ ಯುವಕ ವಶಕ್ಕೆ

ಕೋಟ ಫೆ.9(ಉಡುಪಿ ಟೈಮ್ಸ್ ವರದಿ): ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಬ್ರಹ್ಮಾವರದ ಗುಂಡ್ಮಿ ಗ್ರಾಮದ ಸಾಸ್ತಾನ ಟೋಲ್ ಗೇಟ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಓರ್ವ ಯುವಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಇಂದು ಬೆಳಿಗ್ಗೆ ಖಚಿತ ಮಾಹಿತಿ ಪಡೆದ ಕೋಟ ಠಾಣಾ ಪೊಲೀಸರು ಗುಂಡ್ಮಿ ಗ್ರಾಮದ ಸಾಸ್ತಾನ ಟೋಲ್‌ಗೇಟ್‌ನ ಬಳಿ ಅಫ್ವಾನ್ (26) ಎಂಬಾತನನ್ನು ಮಾದಕ ವಸ್ತು ಸೇವಿಸಿರುವ ಅನುಮಾನದ ಮೇರೆಗೆ ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈತನ ವೈದ್ಯಕೀಯ ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವಿಸಿರುವುದು ಧೃಢ ಪಟ್ಟ ಕಾರಣ ಈತನ ವಿರುದ್ಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!