ಪರಿವಾರ, ತಳವಾರ ಸಮುದಾಯ ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ವಿವಿಧೆಡೆ ನೆಲೆಸಿರುವ ಪರಿವಾರ, ತಳವಾರ ಸಮುದಾಯವನ್ನು ಶೀಘ್ರದಲ್ಲೇ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿರುವ ಪರಿವಾರ / ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ನಮ್ಮ ಸರ್ಕಾರವು ತೀರ್ಮಾನಿಸಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿದ್ದು, ಸಮುದಾಯದ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲು ಸೂಚನೆ ನೀಡಿರುವುದಾಗಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.