ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ರಾಜ್ಯದಿಂದ ನಾರಾಯಣ ಕೃಷ್ಣಸಾ ಭಾಂಡಗೆಗೆ ಟಿಕೆಟ್

ಹೊಸದಿಲ್ಲಿ: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡಯಾಗಿದ್ದು, ಕರ್ನಾಟಕದಿಂದ ನಾರಾಯಣ ಕೃಷ್ಣಸಾ ಭಾಂಡಗೆಗೆ ರಾಜ್ಯಸಭಾ ಟಿಕೆಟ್ ನೀಡುವ ಮೂಲಕ ಅಚ್ಚರಿಯ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗಿದೆ.

ಪಕ್ಷದ ಕಾರ್ಯಕರ್ತರು ಆಗಿರುವ ನಾರಾಯಣ ಭಾಂಡಗೆ ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿದ್ದರು. ಕರ್ನಾಟಕದ ಎಸ್‍ಎಸ್‍ಕೆ ಸಮಾಜದ ಮುಖಂಡರಾಗಿದ್ದು, ಬಿಜೆಪಿಯ ಹಿಂದುಳಿದ ವರ್ಗಗಳ (ಒಬಿಸಿ)ಘಟಕದ ನಾಯಕರು. ಒಂದು ಬಾರಿ ಬಿಜೆಪಿ ಉಪಾಧ್ಯಕ್ಷ, ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಗೊತ್ತಾಗಿದೆ.

ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‍ನ ಡಾ.ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು 2024ರ ಎಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ. ಅವರಿಂದ ತೆರವಾಗಲಿರುವ ಸ್ಥಾಗಳಿಗೆ ಚುನಾವಣೆ ನಡೆಯಲಿದೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ.

1.ಧರ್ಮಶೀಲಾ ಗುಪ್ತಾ: ಬಿಹಾರ

2. ಭೀಮ್ ಸಿಂಗ್: ಬಿಹಾರ

3.ರಾಜಾ ದೇವೇಂದ್ರ ಪ್ರತಾಪ್ ಸಿಂಗ್: ಛತ್ತೀಸಗಢ

4.ಸುಭಾಷ್ ಬರಲಾ: ಹರಿಯಾಣ

5.ನಾರಾಯಾಣ ಕೃಷ್ಣಸಾ ಭಾಂಡಗೆ: ಕರ್ನಾಟಕ

6.ಆರ್‌ಪಿಎನ್ ಸಿಂಗ್: ಉತ್ತರ ಪ್ರದೇಶ

7.ಸುಭಾಂಶು ತ್ರಿವೇದಿ: ಉತ್ತರ ಪ್ರದೇಶ

8.ಚೌಧರಿ ತೇಜ್ವೀರ್ ಸಿಂಗ್: ಉತ್ತರ ಪ್ರದೇಶ

9.ಸಾಧನಾ ಸಿಂಗ್: ಉತ್ತರ ಪ್ರದೇಶ

10.ಅಮರಪಾಲ್ ಮೌರ್ಯ: ಉತ್ತರ ಪ್ರದೇಶ

11.ಸಂಗೀತಾ ಬಲ್ವಂತ್: ಉತ್ತರ ಪ್ರದೇಶ

12.ನವೀನ್ ಜೈನ್: ಉತ್ತರ ಪ್ರದೇಶ

13.ಮಹೇಂದ್ರ ಭಟ್: ಉತ್ತರಾಖಂಡ

14.ಸಮಿಕಾ ಭಟ್ಟಾಚಾರ್ಯ: ಪಶ್ಚಿಮ ಬಂಗಾಳ

ಫೆಬ್ರವರಿ 27 ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ನಾಮನಿರ್ದೇಶನಕ್ಕೆ ಕೊನೆಯ ದಿನಾಂಕ ಫೆಬ್ರವರಿ 15, 2024 ಆಗಿದ್ದು, ನಾಮಪತ್ರಗಳ ಪರಿಶೀಲನೆಯು ಫೆಬ್ರವರಿ 16 ರಂದು ನಡೆಯಲಿದೆ. ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು 20 ಫೆಬ್ರವರಿ 2024 ಆಗಿದೆ.

Leave a Reply

Your email address will not be published. Required fields are marked *

error: Content is protected !!