ವಾಲಿಬಾಲ್ ಪಂದ್ಯಾಟ- ತಡರಾತ್ರಿ ಅನಧಿಕೃತವಾಗಿ ಲೌಡ್ ಸ್ಪೀಕರ್ ಬಳಕೆ: ಪ್ರಕರಣ ದಾಖಲು

ಬ್ರಹ್ಮಾವರ: ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟದಲ್ಲಿ ತಡರಾತ್ರಿ ಅನಧಿಕೃತವಾಗಿ ಲೌಡ್ ಸ್ಪೀಕರ್ ಬಳಕೆ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಳಕರ್ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟದಲ್ಲಿ ಲೌಡ್ ಸ್ಪೀಕರ್ ಹಾಕಿ ವೀಕ್ಷಕ ವಿವರಣೆ ಮಾಡಿ ಸಾರ್ವಜನಿಕರಿಗೆ ತೊಂದರೆಯ ದೂರಿನ್ವಯ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಹೋಗಿ ಪೊಲೀಸರು ನೋಡಿದಾಗ ಹೊಸೂರು ಗ್ರಾಮದ ಕೆಳಕರ್ಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ಹೊನಲು ಬೆಳಕಿನ ವಾಲಿಬಾಲ್‌ ಪಂದ್ಯಾಟದಲ್ಲಿ ಲೌಡ್ ಸ್ಪೀಕರ್ ಹಾಕಿ ವೀಕ್ಷಕ ವಿವರಣೆಯನ್ನು ತಡ ರಾತ್ರಿವರೆಗೂ ನಡೆಸುತ್ತಿದ್ದು, ಈ ಪಂದ್ಯಾಟದ ಆಯೋಜಕರಲ್ಲಿ ವಿಚಾರಿಸಿದಲ್ಲಿ ಸಕ್ಷಮ ಪ್ರಾಧಿಕಾರದಿಂದ ಪರವಾನಿಗೆ ಹಾಗೂ ಪೂರ್ವಾನುಮತಿ ಪಡೆದುಕೊಂಡಿರುವುದಿಲ್ಲ ಎಂದು ತಿಳಿಸಿದ್ದಾರೆ.

ಯಾವುದೇ ಪರವಾನಿಗೆ ಇಲ್ಲದೇ ತಡ ರಾತ್ರಿವರೆಗೆ ಧ್ವನಿವರ್ದಕವನ್ನು ಅತೀ ಕರ್ಕಶವಾಗಿ ಸಾರ್ವಜನಿಕರಿಗೆ ಉಪದ್ರವಾಗುವ ರೀತಿಯಲ್ಲಿ ಬಳಸಿ ಸಾರ್ವಜನಿಕ ತೊಂದರೆವುಂಟು ಮಾಡಿದ ಆರೋಪದಲ್ಲಿ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!