ಉಡುಪಿ: ಟ್ಯಾಂಕರ್ ಡಿಕ್ಕಿ- ಸಿಟಿ ಬಸ್ ಚಾಲಕ ಮೃತ್ಯು
ಉಡುಪಿ ಫೆ.12(ಉಡುಪಿ ಟೈಮ್ಸ್ ವರದಿ): ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದು ನಗರದ ಸಿಟಿ ಬಸ್ ಚಾಲಕ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ.
ನಗರರ ಖಾಸಗಿ ಎಪಿಎಂ ಸಿಟಿ ಬಸ್ ಚಾಲಕ ಮಂಜುನಾಥ್ (36) ಮೃತಪಟ್ಟವರು. ಇವರು ಇಂದು ಸಂಜೆ ತಮ್ಮ ಟಿವಿಎಸ್ ಆಕ್ಸಲ್ ನಲ್ಲಿ ಬಾಳಿಗ ಹಾಸ್ಪಿಟಲ್ ದೊಡ್ಡಣಗುಡ್ಡೆಯಿಂದ ಪೆರಂಪಳ್ಳಿಯ ತಮ್ಮ ಬಾಡಿಗೆ ಮನೆಗೆ ಹೋಗುತ್ತಿದ್ದಾಗ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದೆ. ಪರಿಣಾಮ ಗಂಭೀರ ಗಾಯಗೊಂಡ ಮಂಜುನಾಥ್ ಅವರು ಮೃತಪಟ್ಟಿದ್ದಾರೆ. ಅವರು ತಮ್ಮ ಮಗಳ 2ನೇ ವರ್ಷದ ಹುಟ್ಟುಹಬ್ಬಕ್ಕಾಗಿ ಕೇಕ್ ಕೊಂಡು ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.