ಉಡುಪಿ: ಫೆ.20 ರಂದು ಕವಿ ಸರ್ವಜ್ಞ ಜಯಂತಿ ಆಚರಣೆ
ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಇವರ ಆಯೋಜನೆಯಲ್ಲಿ ಉಡುಪಿಯ ಅಜ್ಜರಕಾಡು ಪಿ.ಜಿ. ಎ.ವಿ ಹಾಲ್ ಡಾ. ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ಕಾಲೇಜು ಇಲ್ಲಿ ಫೆಬ್ರವರಿ 20 ರಂದು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಕುಲಾಲ ಸಂಘಗಳ ಪ್ರಮುಖರ ಸಮ್ಮುಖದಲ್ಲಿ ಕವಿ ಸರ್ವಜ್ಞ ಜಯಂತಿ ಆಚರಣೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಕುಲಾಲ ಸಂಘಟನೆ ಪ್ರಕಟಣೆಯಲ್ಲಿ ತಿಳಿಸಿದೆ.