ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅವಳಡಿಸುವ ಅವಧಿ ವಿಸ್ತರಣೆ- ರಾಮಲಿಂಗ ರೆಡ್ಡಿ
ಬೆಂಗಳೂರು, ಫೆ .14: ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (ಹೆಚ್ಎಸ್ಆರ್ಪಿ) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವ ಗಡುವನ್ನು ಮೂರು ತಿಂಗಳು ವಿಸ್ತರಿಸಲಾಗುತ್ತದೆ. ಫೇಕ್ ವೆಬ್ ಸೈಟ್ ಬಗ್ಗೆ ಎಚ್ಚರ ವಹಿಸಲಾಗುತ್ತದೆ. ಈ ಯೋಜನೆ ಪಾರದರ್ಶಕ ವಾಗಿದೆ ಎಂದು ತಿಳಿಸಿದ್ದಾರೆ.ಇನ್ನು ಈ HSRP ಅಲ್ಯುಮಿನಿಯಂ ಲೋಹದಿಂದ ತಯಾರಿಸಲಾಗು ತ್ತದೆ. ಈಗಾಗಲೇ ಹೊಸ ವಾಹನಗಳಲ್ಲಿ ಈ ರೀತಿಯ ನಂಬರ್ ಪ್ಲೇಟ್ ಕಡ್ಡಾಯವಾಗಿ ಅಳವಡಿಸಲಾಗುತ್ತಿದೆ. ಈ ಪ್ಲೇಟ್ಗಳಲ್ಲಿ ನಂಬರ್ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತದೆ.