ಫೆ.15 ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಚೇರಿ ಉದ್ಘಾಟನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಕಛೇರಿಯ ಉದ್ಘಾಟನಾ ಸಮಾರಂಭವು ನಾಳೆ ಫೆ.15 ಗುರುವಾರ ಸಂಜೆ ಗಂಟೆ 5.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿ, ‘ಮಾಂಡವಿ ಟ್ರೇಡ್ ಸೆಂಟರ್’ ಸಂಕೀರ್ಣ ಕಡಿಯಾಳಿ ಇದರ ತಳ ಅಂತಸ್ತಿನಲ್ಲಿ ನಡೆಯಲಿದೆ.
ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಹಾಲಿ ಶಾಸಕರು ಮಾಜಿ ಸಚಿವರು ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪ್ರಭಾರಿ ಅರಗ ಜ್ಞಾನೇಂದ್ರ ಇವರು ಚುನಾವಣಾ ಕಚೇರಿಯನ್ನು ಉದ್ಘಾಟಿಸಲಿದ್ದಾರೆ.
ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಸಹಿತ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.