ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 3 ಸಾವಿರ ಕೋಟಿ, ಮೊದಲ ಬಾರಿಗೆ‌ ಸೀ‌ ಆಂಬುಲೆನ್ಸ್

ಬೆಂಗಳೂರು, ಫೆ 16: ಸಿದ್ದರಾಮಯ್ಯ ಅವರು ಮೀನುಗಾರಿಕೆ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ.

ಮತ್ಸ್ಯ ಆಶಾಕಿರಣ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಕರಾವಳಿಯ ಮೀನುಗಾರರಿಗೆ ನೀಡುತ್ತಿರುವ ಪರಿಹಾರ ಮೊತ್ತದ ರಾಜ್ಯದ ಪಾಲನ್ನು 1,500 ರೂ.ಗಳಿಂದ 3,000ರೂ.ಗಳಿಗೆ ಹೆಚ್ಚಿಸಲಾಗಿದೆ. ಸಮುದ್ರ ಮೀನುಗಾರಿಕೆಗೆ ತೆರಳಿದಾಗ ಅಪಘಾತ ಅಥವಾ ಅನಾರೋಗ್ಯಕ್ಕೆ ಒಳಗಾಗುವ ಮೀನುಗಾರರನ್ನು ತ್ವರಿತವಾಗಿ ದಡಕ್ಕೆ ತರಲು ರಾಜ್ಯದಲ್ಲಿ ಪ್ರಪ್ರಥಮ ಸಮುದ್ರ ಆಂಬುಲೆನ್ಸ್ ಅನ್ನು 7 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲಾಗುವುದು.2024-25ನೇ ಸಾಲಿನಲ್ಲಿ 10,000 ವಸತಿರಹಿತ ಮೀನುಗಾರರಿಗೆ ರಾಜ್ಯ ಸರ್ಕಾರದ ವಿವಿಧ ವಸತಿ ಯೋಜನೆಗಳಡಿಯಲ್ಲಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡಲಾಗುವುದು ಎಂದರು.

ರಾಜ್ಯದಲ್ಲಿನ 16 ಮೀನು ಮರಿ ಉನ್ನತೀಕರಣವನ್ನು ನಬಾರ್ಡ್ ಉತ್ಪಾದನಾ ಕೇಂದ್ರಗಳ ಸಹಯೋಗದೊಂ ದಿಗೆ 20 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಚಿತ್ರದುರ್ಗ, ಹೊಳಲ್ಕೆರೆ ಮತ್ತು ಹೊಸದುರ್ಗ ತಾಲ್ಲೂಕುಗಳ ಗಣಿಬಾಧಿತ ಪ್ರದೇಶದಲ್ಲಿ ಮೀನುಗಾರಿಕೆಯನ್ನು ಕೈಗೊಳ್ಳಲು 6 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನು ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.ಭದ್ರಾವತಿಯಲ್ಲಿ ಹೈಟೆಕ್​ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!