ಪರೀಕ್ಷೆಯನ್ನು ನಕಲು ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿ- 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ
ಮಣಿಪಾಲ ಫೆ.16(ಉಡುಪಿ ಟೈಮ್ಸ್ ವರದಿ): ಪರೀಕ್ಷಾ ವೇಳೆ ಮೊಬೈಲ್ ಬಳಕೆ ಮಾಡಿ ಪರೀಕ್ಷಾ ಕೊಠಡಿಯಿಂದ ಹೊರಹಾಕಲ್ಪಟ್ಟ ವಿದ್ಯಾರ್ಥಿ ಮನನೊಂದು ಕ್ಲಾಸ್ ರೂಮ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮಧ್ಯಾಹ್ನ ಮಣಿಪಾಲದ ಕಾಲೇಜೊಂದರಲ್ಲಿ ನಡೆದಿದೆ.
ಮಾಣಿಪಾಲದ ಮಾಹೆಯ ಎಂಸಿಎಚ್ಪಿ ವಿಭಾಗದ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಬಿಹಾರ ಮೂಲದ ಸತ್ಯಂ ಸುಮನ್ (20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಇಂದು ಮಧ್ಯಾಹ್ನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ನಡೆಯುತ್ತಿದ್ದ ವೇಳೆ ಸತ್ಯಂ ಸುಮನ್ ಮೊಬೈಲ್ ಬಳಕೆ ಮಾಡಿದ್ದಾನೆ. ಇದನ್ನು ಕಂಡ ಶಿಕ್ಷಕರು ಆತನನ್ನು ಪರೀಕ್ಷಾ ಕೊಠಡಿಯಿಂದ ಹೊರ ಹಾಕಿದ್ದಾರೆ. ಇದರಿಂದ ಮನನೊಂದ ವಿದ್ಯಾರ್ಥಿ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆಯೊಂದೇ ಪರಿಹಾರವಲ್ಲ ಆತ್ಮಹತ್ಯೆ ಮಾಡಿಕೊಳ್ಳುವ ಸಂಭವನೀಯ ವ್ಯಕ್ತಿಗಳ ಗಮನಕ್ಕೆ, ಸಹಾಯವಾಣಿ ನಂಬರ್ : 080 2572 2573, ಸಮರ್ಥನಂ ಆವರಣ, 15ನೇ ಕ್ರಾಸ್, ಹೆಚ್ಎಸ್ಆರ್ ಸೆಕ್ಟರ್- 4, ಬೆಂಗಳೂರು.