ಹುಂಡೈ ಕಾರು ಶೋ ರೂಂನಲ್ಲಿ ಬೆಂಕಿ ಅವಘಡ- ಕೋಟ್ಯಾಂತರ ರೂ.ನಷ್ಟ
ಹುಂಡೈ ಕಾರು ಶೋ ರೂಂನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಕಳೆದ ರಾತ್ರಿ ಶಿವಮೊಗ್ಗ ನಗರದಲ್ಲಿ ನಡೆದಿದ್ದು ಕೋಟ್ಯಾಂತರ ರೂ. ನಷ್ಟ ಸಂಭವಿಸಿದೆ.
ಶಂಕರಮಠ ರಸ್ತೆಯಲ್ಲಿರುವ ಹುಂಡೈ ಶೋ ರೂಂನಲ್ಲಿ ಈ ಘಟನೆ ಸಂಭವಿಸಿದೆ. ಶೋ ರೂಂನ ಮೇಲ್ಛಾವಣಿಯಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಶೋ ರೂಂ ಸಿಬ್ಬಂದಿಗಳು, ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.