ಕಾಪು: ಪಾಲಿಟೆಕ್ನಿಕ್ ಕಾಲೇಜ್‌ನ ಉಪನ್ಯಾಸಕ ದೇವಳದ ಕೆರೆಗೆ ಹಾರಿ ಆತ್ಮಹತ್ಯೆ

ಕಾಪು: ಇಲ್ಲಿನ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕರ ಮೃತದೇಹ ಪತ್ತೆಯಾಗಿದೆ.

ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಶುಕ್ರವಾರ ಮುಂಜಾನೆ ದೇವಳದ ಕೆರೆಯ ದಡದಲ್ಲಿ ಲ್ಯಾಪ್‌ಟಾಪ್ ಸಹಿತ ಕೆಲ ಪರಿಕರಗಳು ಪತ್ತೆಯಾಗಿದೆ. ದೇವಳದ ಸಿಸಿ ಕ್ಯಾಮಾರ ಸಾಧನವನ್ನು ಪರಿಶೀಲನೆ ನಡೆಸಿದಾಗ ಈತ ರಾತ್ರಿ ಹನ್ನೆರಡರ ಬಳಿಕ ದೇವಳದ ಪರಿಸರದಲ್ಲಿ ಸುತ್ತಾಡುತ್ತಿದ್ದ ದೃಶ್ಯ ಸೆರೆಯಾಗಿದೆ. ಮೇಲ್ನೋಟಕ್ಕೆ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ.

ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ, ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕ ಸಹಕಾರದಿಂದ ಶವವನ್ನು ಕೆರೆಯಿಂದ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸಾಗಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!