ಮಂಗಳೂರು: ಸಿಎಂ ಸಿದ್ದರಾಮಯ್ಯರಿಗೆ ಘೇರಾವ್- ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ವಶಕ್ಕೆ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಅಡ್ಯಾರ್ಗೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಗರದ ಬೋಂದೇಲ್ನಲ್ಲಿ ನಡೆದಿದ್ದು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಅಡ್ಯಾರ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವಾಗ ಈ ಘಟನೆ ನಡೆದಿದೆ.
ಇತ್ತೀಚೆಗ ನಗರದ ಸೈಂಟ್ ಜೆರೋಸಾ ಶಾಲೆಯಲ್ಲಿ ನಡೆದ ವಿವಾದದ ಬಳಿಕ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ಮತ್ತಿತರ ಮೇಲೆ ದಾಖಲಾದ ಎಫ್ಐಆರ್ನ್ನು ಖಂಡಿಸಿ ಈ ಪ್ರತಿಭಟನೆ ನಡೆಸಲಾಗಿದೆ ಎಂದು ಕಾರ್ಯಕರ್ತರು ಹೇಳಿದ್ದಾರೆ.