ಶಾಸಕ ಕಾಮತ್ ಮೇಲೆ ಪ್ರಕರಣ- ಬಿಜೆಪಿ ವತಿಯಿಂದ ಇಂದು ಬೃಹತ್ ಪ್ರತಿಭಟನೆಗೆ ಕರೆ

ಮಂಗಳೂರು: ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶ್ರೀರಾಮ ದೇವರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅವಹೇಳನವನ್ನು ವಿರೋಧಿಸಿದ ಕಾರಣಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಖಂಡಿಸಿ, ಹಿಂದೂ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ ಇಂದು (ಫೆಬ್ರವರಿ ಮಧ್ಯಾಹ್ನ 3.30 ಕ್ಕೆ ಸರಿಯಾಗಿ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.

ಧರ್ಮದ ಮೇಲಾಗುವ ಅನ್ಯಾಯವನ್ನು ಪ್ರತಿಭಟಿಸಲು ಎಲ್ಲರೂ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!