ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ದಿನಾಂಕ ಪ್ರಕಟ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್​ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ವಿಕಾಸಸೌಧದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಪರೀಕ್ಷಾ ದಿನಾಂಕ ಹಾಗೂ ಪರೀಕ್ಷೆಗಳಿಗೆ ಸಂಬಂಧಪಟ್ಟ ಇತರ ಮಾಹಿತಿಗಳನ್ನು ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್​ 01 ರಿಂದ 22ರ ವರೆಗೆ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಏಪ್ರಿಲ್ 06ರವರೆಗೆ ನಡೆಯಲಿವೆ ಎಂದು ತಿಳಿಸಿದರು. ಈ ವರ್ಷ ರಾಜ್ಯದಲ್ಲಿ 8,96,271 ಮಕ್ಕಳು ಎಸ್​ಎಸ್​ಎಲ್​ಸಿ ಪರೀಕ್ಷೆ ಪರೀಕ್ಷೆ ಬರೆಯತ್ತಿದ್ದಾರೆ. 2,741 ಪರೀಕ್ಷಾ ಕೇಂದ್ರಗಳಿವೆ. ಇನ್ನು 6,98, 624 ಮಕ್ಕಳು ದ್ವೀತಿಯ ಪಿಯುಸಿ ಪರೀಕ್ಷೆ ಬರೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!