ಉಡುಪಿ: ಗ್ರಾಹಕರ ಸೋಗಿನಲ್ಲಿ ಬಂದು 1.98 ಲಕ್ಷ ರೂ.ಮೌಲ್ಯದ ಚಿನ್ನಾಭರಣ ವಂಚನೆ

ಉಡುಪಿ, ಫೆ.20: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ಫೆ.18 ಭಾನುವಾರ ನಡೆದಿದೆ.

ಉಡುಪಿ ಕನಕದಾಸ ರಸ್ತೆಯಲ್ಲಿರುವ ಹೆಸರಾಂತ ಜುವೆಲ್ಲರಿ ಅಂಗಡಿಗೆ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು ಗ್ರಾಹಕರಂತೆ ಅಂಗಡಿಗೆ ಬಂದು, 15.800 ಗ್ರಾಂ ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿದರು. ಇದಕ್ಕೆ ಬದಲಾಗಿ ಮಹಿಳೆಯರು ತಮ್ಮ ಬಳಿ ಇದ್ದ ಹಳೆಯ 31.490 ಗ್ರಾಂ ತೂಕದ ಒಂದು ನೆಕ್ಲೇಸ್ ಮತ್ತು 10.940 ಗ್ರಾಂ ತೂಕದ ಜುಮುಕಿ ನೀಡಿದ್ದರು.

ಇದರಲ್ಲಿ 48,771ರೂ. ಉಳಿಕೆ ಹಣದ ಪೈಕಿ 19,000ರೂ. ಹಣವನ್ನು ನಗದಾಗಿ ಪಡೆದುಕೊಂಡು ಅಂಗಡಿಯಿಂದ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ವ್ಯವಹಾರದ ಸಮಯ ಚೌಕಾಸಿ ಮಾಡಿದ ಮಹಿಳೆಯರು ಮಾಲಕರ ಗಮನವನ್ನು ಬೇರೆಡೆಗೆ ಸೆಳೆದು, ಪರೀಕ್ಷಿಸಲು ನೀಡಿದ್ದ ಅಸಲಿ ಚಿನ್ನದ ಬದಲಿಗೆ ನಕಲಿ ಚಿನ್ನದ ಆಭರಣಗಳನ್ನು ನೀಡಿ 1,98,923ರೂ. ಮೌಲ್ಯದ ಅಸಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಹೋಗಿ ವಂಚಿಸಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!